alex Certify
ಕನ್ನಡ ದುನಿಯಾ       Mobile App
       

Kannada Duniya

ಯುವತಿ ಮನೆಗೆ ಬಂದವನಿಂದ ರಾಕ್ಷಸೀಯ ಕೃತ್ಯ

ben-ramnagr

ಬೆಂಗಳೂರು: ಯುವತಿಯೊಬ್ಬಳನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ರಾಮಸಂದ್ರ ಗ್ರಾಮದಲ್ಲಿ ನಡೆದಿದೆ.

21 ವರ್ಷದ ಯುವತಿ ಕೊಲೆಯಾದ ದುರ್ದೈವಿ. ರಾತ್ರಿ ಆಕೆಯ ಮನೆಗೆ ಬಂದಿದ್ದ 22 ವರ್ಷದ ಪರಿಚಿತ ವ್ಯಕ್ತಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಯುವತಿಯ ತಾಯಿ ಮನೆಗೆ ಬಂದ ಸಂದರ್ಭದಲ್ಲಿ ಕೊಲೆ ನಡೆದಿರುವುದು ಗೊತ್ತಾಗಿದೆ. ಹಣಕಾಸಿನ ವಿಚಾರಕ್ಕೆ ಜಗಳವಾಗಿ ಅದೇ ಗ್ರಾಮದ ವ್ಯಕ್ತಿ ಕೊಲೆ ಮಾಡಿರಬಹುದೆಂದು ಹೇಳಲಾಗಿದೆ.

ಕುಂಬಳಗೋಡು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...