alex Certify
ಕನ್ನಡ ದುನಿಯಾ       Mobile App
       

Kannada Duniya

ಜನನಿಬಿಡ ಪ್ರದೇಶದಲ್ಲೇ ನಡೆದಿದೆ ಘೋರ ಕೃತ್ಯ

ಬೆಂಗಳೂರು: ಬೆಳ್ಳಂಬೆಳಿಗ್ಗೆ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಸಣ್ಣಕ್ಕಿ ಬಯಲು, ಸುಂಕದಕಟ್ಟೆ ಸೇತುವೆ ಬಳಿ ನಡೆದಿದೆ.

ಕೋಟೇಶ್ವರ ರಾವ್(30) ಕೊಲೆಯಾದವರು ಎಂದು ಗುರುತಿಸಲಾಗಿದೆ. ಬ್ಯಾಂಕ್ ಮ್ಯಾನೇಜರ್ ಪುತ್ರನಾಗಿರುವ ಕೋಟೇಶ್ವರ ರಾವ್ ಸ್ನೇಹಿತರೊಂದಿಗೆ ಹೋಗುವಾಗ, ಆಟೋದಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.

ಜನನಿಬಿಡ ಪ್ರದೇಶದಲ್ಲೇ ನಡು ರಸ್ತೆಯಲ್ಲಿ ಕೋಟೇಶ್ವರ ರಾವ್ ನನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕಣ್ಣೆದುರಲ್ಲೇ ನಡೆದ ಈ ಕೃತ್ಯವನ್ನು ಕಂಡ ಜನ ಬೆಚ್ಚಿ ಬಿದ್ದಿದ್ದಾರೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...