alex Certify
ಕನ್ನಡ ದುನಿಯಾ       Mobile App
       

Kannada Duniya

ರಾತ್ರಿ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ ಘೋರ ಕೃತ್ಯ

ಬೆಂಗಳೂರು: ಮೊಬೈಲ್ ಹಾಗೂ ಪರ್ಸ್ ದೋಚುವ ಉದ್ದೇಶದಿಂದ, ಯುವನೊಬ್ಬನ ಎದೆಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ, ಬೆಂಗಳೂರಿನ ನಾಯಂಡಹಳ್ಳಿ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ.

ನಡೆದುಕೊಂಡು ಹೋಗುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಬೆದರಿಸಿ ಹಣ ದೋಚಲು ಮುಂದಾಗಿದ್ದು, ಯುವಕ ಪ್ರತಿರೋಧ ತೋರಿದಾಗ, ಎದೆಗೆ ಚಾಕುವಿನಿಂದ ಇರಿದು ಮೊಬೈಲ್, ಪರ್ಸ್ ದೋಚಿ ಪರಾರಿಯಾಗಿದ್ದಾರೆ.

ಹೊಯ್ಸಳ ಗಸ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಕೊಲೆಯಾದ ವ್ಯಕ್ತಿ ಗುರುತು ಪತ್ತೆಯಾಗಿಲ್ಲ. ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...