alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಮರಾಜಪೇಟೆಯಲ್ಲಿ ವಾಸವಾಗಿದ್ದ ವಿಜಯಾ ಕೊಲೆಯಾದವರು.

ಮಂಗಳೂರು ಮೂಲದ ವಿಜಯಾ 4 -5 ವರ್ಷಗಳಿಂದ ಚಾಮರಾಜಪೇಟೆಯಲ್ಲಿ ವಾಸವಾಗಿದ್ದು, ಅವರ ಪತಿ ಸೀರೆ ವ್ಯಾಪಾರ ಮಾಡಿಕೊಂಡಿದ್ದಾರೆ. ಪತಿ ಆಗಾಗ ಮನೆಗೆ ಬಂದು ಹೋಗುತ್ತಿದ್ದರು.

ದಂಪತಿಗೆ ಮಕ್ಕಳಿಲ್ಲದ ಕಾರಣ, ಯುವತಿಯನ್ನು ಸಾಕಿದ್ದರು. ಆಕೆ ಪ್ರೀತಿಸಿ ಮದುವೆಯಾಗಿದ್ದು, ಹಣಕ್ಕಾಗಿ ವಿಜಯಾ ಅವರಿಗೆ ಪೀಡಿಸುತ್ತಿದ್ದಳೆನ್ನಲಾಗಿದೆ. ನಿನ್ನೆ ರಾತ್ರಿ ವಿಜಯಾ ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭದಲ್ಲಿ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ವಿಜಯಾ ಅವರ ಕತ್ತು ಸೀಳಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...