alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರು ಪೊಲೀಸರಿಂದ ಮಾದರಿ ಕಾರ್ಯ

ben-pol-ambu

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂಚರಿಸುವ ಸಂದರ್ಭದಲ್ಲಿ ಪೊಲೀಸರು ಆಂಬುಲೆನ್ಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟು ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಮೇ 3 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಿ.ಎಂ. ಆಗಮಿಸಿದ್ದ ಸಂದರ್ಭದಲ್ಲಿ ಕೆಲಕಾಲ ಸಂಚಾರ ಬಂದ್ ಮಾಡಿದ್ದರಿಂದ ಟ್ರಾಫಿಕ್ ನಲ್ಲಿ ರೋಗಿ ಇದ್ದ ಆಂಬುಲೆನ್ಸ್ ಸಿಕ್ಕಿಕೊಂಡಿತ್ತು. ಇದು ವಿವಾದಕ್ಕೆ ಕಾರಣವಾಗಿತ್ತು. ನಂತರದಲ್ಲಿ ಆಂಬುಲೆನ್ಸ್ ಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ನೀಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದರು.

ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಅಧಿಕೃತ ನಿವಾಸ ‘ಕಾವೇರಿ’ಗೆ ತೆರಳುವ ಸಂದರ್ಭದಲ್ಲಿ ಜೀರೋ ಟ್ರಾಫಿಕ್ ಕಲ್ಪಿಸಲಾಗಿದ್ದು, ಈ ಸಂದರ್ಭದಲ್ಲಿ ಆಂಬುಲೆನ್ಸ್ ಆಗಮಿಸಿದೆ.

ಇದನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸಿ.ಎಂ. ಬೆಂಗಾವಲು ಪಡೆಯ ಸಿಬ್ಬಂದಿಗೆ ತಿಳಿಸಲಾಗಿದೆ. ಸಿ.ಎಂ. ವಾಹನಕ್ಕಿಂತ ಮುಂದೆ ಆಂಬುಲೆನ್ಸ್ ಸಾಗಲು ಪೊಲೀಸರು ಅನುವು ಮಾಡಿಕೊಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...