alex Certify
ಕನ್ನಡ ದುನಿಯಾ       Mobile App
       

Kannada Duniya

ರಸ್ತೆ ಬದಿಯಲ್ಲೇ ಮಾಡಿದ್ರು ಇಂತಹ ಕೆಲಸ

ben-vivek-ngr

ಬೆಂಗಳೂರು: ರಸ್ತೆ ಬದಿಯಲ್ಲೇ ಮದ್ಯ ಸೇವನೆ ಮಾಡುತ್ತಿದ್ದ ನಾಲ್ವರು ಇದನ್ನು ಪ್ರಶ್ನಿಸಿದ ಪೊಲೀಸ್ ಮೇಲೆಯೇ ಹಲ್ಲೆ ನಡೆಸಿದ್ದಾರೆ.

ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀನಿವಾಗಿಲು ಬಳಿ ರಾತ್ರಿ ಈ ಘಟನೆ ನಡೆದಿದೆ. ಸುನಿಲ್, ಜಗನ್, ಕುಮಾರ್ ಹಾಗೂ ಮತ್ತೊಬ್ಬ ಮದ್ಯ ಸೇವನೆ ಮಾಡುತ್ತಾ ಕುಳಿತಿದ್ದಾರೆ.

ಗಸ್ತಿನಲ್ಲಿದ್ದ ಪೇದೆ ಸಂತೋಷ್ ಸ್ಥಳದಿಂದ ತೆರಳುವಂತೆ ಸೂಚನೆ ನೀಡಿದಾಗ, ಅವಾಚ್ಯ ಶಬ್ಧಗಳಿಂದ ನಿಂದಿಸಿ ಅವರ ಮೇಲೆ ನಾಲ್ವರು ಹಲ್ಲೆ ಮಾಡಿದ್ದಾರೆ.

ಸಂತೋಷ್ ಠಾಣೆಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಆಗ ಠಾಣೆ ಎದುರು ಆಗಮಿಸಿದ ನಾಲ್ವರು ಆರೋಪಿಗಳ ಕಡೆಯವರು ಗಲಾಟೆ ನಡೆಸಿದ್ದಾರೆ. ಪೇದೆ ಹಣ ಕೇಳಿದ್ದು, ಕೊಡದ ಕಾರಣ ಅವರೇ ಹಲ್ಲೆ ಮಾಡಿದ್ದಾಗಿ ಆರೋಪಿಸಿದ್ದಾರೆ.

ಆರೋಪಿಗಳು ಗಾಂಜಾ ಮತ್ತಿನಲ್ಲಿದ್ದು, ರಸ್ತೆ ಬದಿಯಲ್ಲಿ ಮದ್ಯಸೇವನೆ ಮಾಡಿದ್ದಾರೆ ಎನ್ನಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ,

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...