alex Certify
ಕನ್ನಡ ದುನಿಯಾ       Mobile App
       

Kannada Duniya

ಪೇದೆ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಬೆಂಗಳೂರು: ಹೆಚ್.ಎ.ಎಲ್. ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಿ.ಎಸ್.ಐ. ಮೇಲೆ ಹಲ್ಲೆ ನಡೆಸಿದ ಘಟನೆ ಬೆನ್ನಲ್ಲೇ, ಅದೇ ರೀತಿಯ ಮತ್ತೊಂದು ಪ್ರಕರಣ ನಡೆದಿದೆ.

ಬೆಂಗಳೂರು ಜೆ.ಜೆ. ನಗರ ಪೊಲೀಸ್ ಠಾಣೆಯ ಪೇದೆ ರಾಜೇಂದ್ರ ಅವರ ಮೇಲೆ ಗಾಂಜಾ ಮತ್ತಿನಲ್ಲಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಪಾದರಾಯನಪುರ 11 ನೇ ಕ್ರಾಸ್ ನಲ್ಲಿ ಗಲಾಟೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಹೊಯ್ಸಳ ಪೊಲೀಸ್ ರಾಜೇಂದ್ರ ಸ್ಥಳಕ್ಕೆ ತೆರಳಿದ್ದಾರೆ.

ಗಲಾಟೆ ನಿಯಂತ್ರಿಸಲು ಮುಂದಾದ ಸಂದರ್ಭದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತಲೆ, ಕೈಗೆ ಹಲ್ಲೆ ಮಾಡಿದ್ದಾರೆ. ಗಾಯಾಳು ರಾಜೇಂದ್ರರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ. ಜೆ.ಜೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...