alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರೀ ಮಳೆಗೆ ತತ್ತರಿಸಿದ ಜನ

rain

ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸತತ 2 ಗಂಟೆಗಳ ಕಾಲ ಸುರಿದ ಭಾರೀ ಮಳೆಗೆ ಜನ ತತ್ತರಿಸುವಂತಾಗಿತ್ತು.

ಆನಂದರಾವ್ ಸರ್ಕಲ್ ಸಮೀಪ ಬೆಂಗಳೂರಿನಿಂದ ಬೈಲಹೊಂಗಲಕ್ಕೆ ಹೊರಟಿದ್ದ ವಾಯುವ್ಯ ಸಾರಿಗೆ ಬಸ್, ಅಂಡರ್ ಪಾಸ್ ನಲ್ಲಿ ಮುಳುಗಿದಾಗ, ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ. ಬಸ್ ನಲ್ಲಿ ಮಹಿಳೆಯರು ಸೇರಿದಂತೆ 15 ಮಂದಿ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

ಭಾರೀ ಮಳೆಯಾಗಿ ಕೆಲವು ಕಡೆಗಳಲ್ಲಿ ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದು, ಕಾರ್, ಆಟೋ ಸೇರಿದಂತೆ ಅನೇಕ ವಾಹನಗಳು ಜಖಂಗೊಂಡಿವೆ.

ಮತ್ತೆ ಕೆಲವು ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಬೆಳಿಗ್ಗೆ ನೀರು ಕಡಿಮೆಯಾಗಿದ್ದು, ನೀರು ನಿಂತಿದ್ದ ಸ್ಥಳದಲ್ಲಿ ಕೆಸರು ತುಂಬಿರುವುದರಿಂದ ವಾಹನ ಸವಾರರು, ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...