alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರು ಮಳೆ ಅವಾಂತರ, ಕತ್ತಲಲ್ಲೇ ಕಾಲ ಕಳೆದ ಜನ

ಬೆಂಗಳೂರು: ರಾಜಧಾನಿಯಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ. ಮಲ್ಲೇಶ್ವರಂ, ನಂದಿ ಲೇಔಟ್, ಶಿವಾಜಿನಗರ, ಶಾಂತಿನಗರ, ಮೆಜೆಸ್ಟಿಕ್ ಸೇರಿದಂತೆ ಅನೇಕ ಕಡೆಗಳಲ್ಲಿ ಭಾರೀ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು.

ಬಿರುಗಾಳಿ ಮಳೆಯ ರಭಸಕ್ಕೆ ನಂದಿನಿ ಲೇಔಟ್ ನಲ್ಲಿ 20 ಕ್ಕೂ ಅಧಿಕ ಮರಗಳು ಧರೆಗುರುಳಿದ್ದು, ಭಾರೀ ಹಾನಿಯಾಗಿದೆ. ಮರ ಬಿದ್ದು ವಿದ್ಯುತ್ ಕಂಬಗಳು ಕೂಡ ಬಿದ್ದಿವೆ. ವಿದ್ಯುತ್ ಲೈನ್ ಗಳಿಗೆ ಹಾನಿಯಾಗಿದೆ. ಪಾರ್ಕಿಂಗ್ ಮಾಡಲಾಗಿದ್ದ ಹತ್ತಾರು ವಾಹನಗಳು ಮರ ಬಿದ್ದ ಕಾರಣ ಜಖಂಗೊಂಡಿವೆ.

ಕೆಲವು ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡು ಜನ ರಾತ್ರಿಯಿಡಿ ಕತ್ತಲಲ್ಲೇ ಕಾಲ ಕಳೆಯುವಂತಾಗಿದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...