alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗಾಳಿ ಆರ್ಭಟದೊಂದಿಗೆ ಭಾರೀ ಮಳೆಯಾಗಿದೆ.

ಬೆಂಗಳೂರಿನ ಮಲ್ಲೇಶ್ವರಂ ಬಿ.ಜೆ.ಪಿ. ಕಚೇರಿ ಬಳಿ, ಯಶವಂತಪುರ, ಬಿ.ಟಿ.ಎಂ. ಲೇಔಟ್, ಬನಶಂಕರಿ ಮೊದಲಾದ ಕಡೆಗಳಲ್ಲಿ ಮರಗಳು ಧರೆಗುರುಳಿವೆ. ಇದರಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲವು ಕಡೆ ಗಾಳಿ, ಮಳೆಗೆ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ. ಕೊಡಗು, ನೆಲಮಂಗಲ, ದೊಡ್ಡಬಳ್ಳಾಪುರ ಮೊದಲಾದ ಕಡೆಗಳಲ್ಲಿ ಮಳೆಯಾಗಿದೆ.

ಚಿಕ್ಕಮಗಳೂರಿನ ಮಲ್ಲಂದೂರು ರಸ್ತೆಯಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡಿದೆ. ಅದೃಷ್ಟವಶಾತ್ ಸಮೀಪದಲ್ಲೇ ಇದ್ದ ವ್ಯಕ್ತಿಯೊಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಕೆಲವು ಕಡೆಗಳಲ್ಲಿ ಆಲಿಕಲ್ಲು ಸಹಿತ ಸುರಿದ ಭಾರೀ ಮಳೆಯಿಂದ ಕೆಲವು ಕಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಮತ್ತು ಒಳನಾಡು ಭಾಗದಲ್ಲಿ ಇನ್ನು ಮಳೆಯಾಗುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...