alex Certify
ಕನ್ನಡ ದುನಿಯಾ       Mobile App
       

Kannada Duniya

ಮಳೆ ಅವಾಂತರಕ್ಕೆ ಮತ್ತೊಂದು ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ಭಾರೀ ಮಳೆ ಅವಾಂತರಕ್ಕೆ ಮತ್ತೊಂದು ಜೀವ ಬಲಿಯಾಗಿದೆ. 16 ವರ್ಷದ ಬಾಲಕಿ ಶೌಚಕ್ಕೆ ತೆರಳಿದ್ದ ಸಂದರ್ಭದಲ್ಲಿ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದಾಳೆ.

ಸಿ.ವಿ. ರಾಮನ್ ನಗರದ ಭಾಗ್ ಮನೆ ಟೆಕ್ ಪಾರ್ಕ್ ಹಿಂಭಾಗದ ರಾಜಕಾಲುವೆ ಬಳಿ ಶೌಚಾಲಯಕ್ಕೆ ತೆರಳಿದ್ದ ಬಾಲಕಿ ಆಯತಪ್ಪಿ ಬಿದ್ದು, ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ.

ರಾಜಕಾಲುವೆಯಲ್ಲಿ ನೀರು ರಭಸವಾಗಿ ಹರಿಯುತ್ತಿರುವುದರಿಂದ ಆಕೆಗೆ ಮೇಲೆ ಬರಲು ಸಾಧ್ಯವಾಗಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ರಕ್ಷಣಾ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಸತತ ಹುಡುಕಾಟ ನಡೆಸಿ, ಬಾಲಕಿ ಮೃತದೇಹವನ್ನು ಹೊರತೆಗೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...