alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕದಲ್ಲಿ ‘ಕಾಲಾ’ ಚಿತ್ರಕ್ಕೆ ಕಂಟಕ

ರಜನಿಕಾಂತ್ ಅಭಿನಯದ ‘ಕಾಲಾ’ ಚಿತ್ರ ಇಂದು ತೆರೆಕಂಡಿದ್ದು, ಆದರೆ ಕರ್ನಾಟಕದಲ್ಲಿ ಈ ಚಿತ್ರ ಪ್ರದರ್ಶನಕ್ಕೆ ಕನ್ನಡಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ.

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಹೇಳಿಕೆ ನೀಡಿದ್ದ ರಜನಿಕಾಂತ್ ಅವರ ನಡೆಯನ್ನು ಖಂಡಿಸಿ, ಕನ್ನಡಪರ ಸಂಘಟನೆಗಳು ‘ಕಾಲಾ’ ಚಿತ್ರ ಪ್ರದರ್ಶಿಸುತ್ತಿರುವ ಚಿತ್ರಮಂದಿರಗಳ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಚಿತ್ರಮಂದಿರಗಳ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈ ಮಧ್ಯೆ ರಾಜ್ಯದ ಕೆಲ ಚಿತ್ರಮಂದಿರಗಳ ಮಾಲೀಕರು ಸ್ವಯಂ ಪ್ರೇರಿತರಾಗಿ ‘ಕಾಲಾ’ ಚಿತ್ರ ಪ್ರದರ್ಶನದಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗಿದೆ. ‘ಕಾಲಾ’ ಚಿತ್ರದ ನಿರ್ಮಾಪಕರು ಚಿತ್ರ ಪ್ರದರ್ಶನಕ್ಕೆ ಅನುಮತಿ ಕೋರಿ ಹೈಕೋರ್ಟ್ ಮೊರೆ ಹೋಗಿದ್ದು, ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ‘ಕಾಲಾ’ ಪ್ರದರ್ಶನಗೊಳ್ಳುವ ಚಿತ್ರಮಂದಿರಗಳಿಗೆ ಪೊಲೀಸರು ಭದ್ರತೆ ಒದಗಿಸಿದ್ದಾರೆ.

ಚಿತ್ರ ಬಿಡುಗಡೆಗೂ ಮುನ್ನ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದ ನಟ ರಜನಿಕಾಂತ್, ತಾನೇನು ತಪ್ಪು ಮಾಡಿಲ್ಲ ದಯವಿಟ್ಟು ಚಿತ್ರ ಪ್ರದರ್ಶನಕ್ಕೆ ಸಹಕರಿಸಿ ಎಂದು ಮನವಿ ಮಾಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...