alex Certify
ಕನ್ನಡ ದುನಿಯಾ       Mobile App
       

Kannada Duniya

ಕೆಲಸ ಕೊಡಿಸುವ ನೆಪದಲ್ಲಿ ಕಾಮುಕನಿಂದ ನೀಚ ಕೃತ್ಯ

ಬೆಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಒಡಿಶಾದ ಭುವನೇಶ್ವರದಲ್ಲಿ ಬಂಧಿಸಲಾಗಿದೆ.

ಸುರೇಶ್(40) ಬಂಧಿತ ಆರೋಪಿ. ಬೆಂಗಳೂರು ಬಾಣಸವಾಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ಹೋಟೆಲ್ ಒಂದರಲ್ಲಿ ಕ್ಯಾಷಿಯರ್ ಆಗಿರುವ ಸುರೇಶ್ ಕೆಲಸ ಕೊಡಿಸುವುದಾಗಿ ನೇಪಾಳ ಮೂಲದ ಯುವತಿಯನ್ನು ಹೋಟೆಲ್ ಗೆ ಕರೆಸಿಕೊಂಡಿದ್ದು, ಆಕೆಯನ್ನು ಮದುವೆಯಾಗುವುದಾಗಿ ಹೇಳಿ ಅತ್ಯಾಚಾರ ಎಸಗಿದ್ದಾನೆ.

ತನಗೆ ಮದುವೆಯಾಗಿರುವ ವಿಚಾರವನ್ನು ಯುವತಿಗೆ ತಿಳಿಸದೇ ನೀಚಕೃತ್ಯವೆಸಗಿದ್ದು, ನಂತರದಲ್ಲಿ ಆತನಿಗೆ ಮದುವೆಯಾಗಿರುವ ಬಗ್ಗೆ ಮಾಹಿತಿ ತಿಳಿದ ಯುವತಿ ಫೆಬ್ರವರಿ 21 ರಂದು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ದಾಖಲಾದ ಬಳಿಕ ಪರಾರಿಯಾಗಿದ್ದ ಸುರೇಶ್ ನನ್ನು ಭುವನೇಶ್ವರದಲ್ಲಿ ಪೊಲೀಸರು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...