alex Certify ಬೆಂಗಳೂರು ಶಾಲಾ ಬಸ್ ನಲ್ಲೇ ನೀಚ ಕೃತ್ಯ: ಡ್ರಾಪ್ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಶಾಲಾ ಬಸ್ ನಲ್ಲೇ ನೀಚ ಕೃತ್ಯ: ಡ್ರಾಪ್ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ

ಬೆಂಗಳೂರು: ಬೆಂಗಳೂರಿನಲ್ಲಿ ಶಾಲಾ ಬಸ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ. ನಿನ್ನೆ ಸಂಜೆ 5:30ರ ಸುಮಾರಿಗೆ ಶಿವಕುಮಾರ್ ಎಂಬಾತ ಕೃತ್ಯವೆಸಗಿದ್ದಾನೆ. ನಾಯಂಡಹಳ್ಳಿ ಸಮೀಪ ಮಹಿಳೆ ಬಸ್ ಗೆ ಕಾಯುತ್ತಿದ್ದರು. ಇದೇ ವೇಳೆ ಶಾಲಾ ಬಸ್ ಚಾಲನೆ ಮಾಡಿಕೊಂಡು ಬಂದಿದ್ದ ಶಿವಕುಮಾರ ಡ್ರಾಪ್ ಕೊಡುವ ನೆಪದಲ್ಲಿ ಪರಿಚಯಸ್ಥ ಮಹಿಳೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.

ನಾಗರಬಾವಿ ಸರ್ವಿಸ್ ರಸ್ತೆಗೆ ಕರೆದೊಯ್ದು ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ನಂತರ ಪುತ್ರನಿಗೆ ಕರೆ ಮಾಡಿ ಮಹಿಳೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಮಹಿಳೆಯ ಪುತ್ರ ಚಾಲಕ ಶಿವಕುಮಾರ್ ನನ್ನು ಥಳಿಸಿದ್ದಾನೆ. ಈ ಸಂಬಂಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ಶಿವಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...