alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಧಾನಿಯಲ್ಲಿ ಮತ್ತೊಂದು ರಾಕ್ಷಸೀಯ ಕೃತ್ಯ

ಬೆಂಗಳೂರು: 5 ವರ್ಷದ ಬಾಲಕಿಗೆ ಚಿತ್ರಹಿಂಸೆ ನೀಡಿ ಅತ್ಯಾಚಾರ ಎಸಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ತರಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರು ಅನಾರೋಗ್ಯದ ಕಾರಣ ಮಗಳನ್ನು ಗೆಳತಿಯ ಬಳಿ ಬಿಟ್ಟಿದ್ದಾರೆ. ಗೆಳತಿಯ ಪ್ರಿಯಕರ ಬಾಲಕಿಗೆ ಹಿಂಸೆ ನೀಡಿದ್ದಾನೆ. ಸಿಗರೇಟ್ ನಿಂದ ಸುಟ್ಟು ಅತ್ಯಾಚಾರ ಎಸಗಿದ್ದಾನೆ.

ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ ಬಾಲಕಿಯನ್ನು ಆಕೆಯ ತಾಯಿ ಆಸ್ಪತ್ರೆಗೆ ಸೇರಿಸಿದ್ದಾರೆ. ಒಂದೆರಡು ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳದ ಕಾರಣ ಕೊನೆಗೆ ಸೇಂಟ್ ಜಾನ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.

ಆಗಸ್ಟ್ 17 ರಿಂದ ಆಸ್ಪತ್ರೆಯಲ್ಲಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಬಾಲಕಿಯ ತಾಯಿ ಪೊಲೀಸರಿಗೆ ಮೊದಲೇ ಮಾಹಿತಿ ನೀಡಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ.

ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...