alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಲ್ಲಿ ತಡರಾತ್ರಿ ಕಾಮುಕರ ಅಟ್ಟಹಾಸ

ben-rape

ಬೆಂಗಳೂರು: ಸಹೋದರನೊಂದಿಗೆ ಇದ್ದಾಗಲೇ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಅರ್ಧ ಗಂಟೆಯೊಳಗೆ ಪೊಲೀಸರು ಕಾಮುಕರಲ್ಲಿ ಓರ್ವನನ್ನು ಬಂಧಿಸಿ ಯುವತಿಯನ್ನು ರಕ್ಷಿಸಿದ್ದಾರೆ.

ರಾತ್ರಿ ಬೆಂಗಳೂರು ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಸಹೋದರನೊಂದಿಗೆ ಊರಿಗೆ ಹೋಗಲು ಯುವತಿ ನಿಂತಿದ್ದ ಸಂದರ್ಭದಲ್ಲಿ ಮೂವರು ಕಾಮುಕರು ಸಹೋದರನ ಮೇಲೆ ಹಲ್ಲೆ ಮಾಡಿ ಯುವತಿಯನ್ನು ಅಪಹರಿಸಿದ್ದಾರೆ.

ಆಕೆಯನ್ನು ಟ್ರಾವೆಲ್ಸ್ ಏಜೆನ್ಸಿಯ ಗೋದಾಮಿಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಯುವತಿ ಕಿಡ್ನಾಪ್ ಮಾಡಿದ್ದನ್ನು ಗಮನಿಸಿದ ಆಟೋ ಚಾಲಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದು, ಯುವತಿಯ ಅಣ್ಣನೂ ಪೊಲೀಸರಿಗೆ ವಿಷಯ ತಿಳಿಸಿದ್ದಾನೆ.

ಕೂಡಲೇ ಕಾರ್ಯಪ್ರವೃತ್ತರಾದ ಗಸ್ತಿನಲ್ಲಿದ್ದ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಆಗ ಮತ್ತೊಬ್ಬರು ನೀಡಿದ ಮಾಹಿತಿ ಆಧರಿಸಿ, ಟ್ರಾವೆಲ್ಸ್ ಗೆ ಸೇರಿದ ಗೋದಾಮಿನ ಮೇಲೆ ದಾಳಿ ಮಾಡಿದ್ದಾರೆ.

ಅಲ್ಲಿದ್ದ ಪ್ರಮುಖ ಆರೋಪಿ ಫಯಾಜ್ ಎಂಬುವವನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಪರಾರಿಯಾಗಿದ್ದಾನೆ. ಆಟೋ ಚಾಲಕನ ನೆರವು ಹಾಗೂ ಪೊಲೀಸರ ಸಮಯಪ್ರಜ್ಞೆಯಿಂದಾಗಿ ಕಾಮುಕರಿಂದ ಯುವತಿ ಬಚಾವ್ ಆಗಿದ್ದಾಳೆ. ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ವಿಚಾರಣೆ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...