alex Certify
ಕನ್ನಡ ದುನಿಯಾ       Mobile App
       

Kannada Duniya

ನಗ್ನ ವಿಡಿಯೋ ತೋರಿಸಿ ನಿರಂತರ ಅತ್ಯಾಚಾರ

ಬೆಂಗಳೂರು: ಮಹಿಳೆಯ ನಗ್ನ ವಿಡಿಯೋ ಮಾಡಿಕೊಂಡು ನಿರಂತರವಾಗಿ ಅತ್ಯಾಚಾರ ಎಸಗಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಗಲಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಡಿಸೆಂಬರ್ 5 ರಂದು ಮಹಿಳೆ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸುನಿಲ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಮಹಿಳೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಒಳನುಗ್ಗಿದ ಕಾಮುಕ ಅತ್ಯಾಚಾರ ಎಸಗಿದ್ದು, ತನ್ನ ನೀಚ ಕೃತ್ಯದ ದೃಶ್ಯಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ.

ಅದನ್ನು ಪತಿಗೆ ತೋರಿಸುವುದಾಗಿ, ಜಾಲತಾಣಗಳಲ್ಲಿ ಬಹಿರಂಗಪಡಿಸುವುದಾಗಿ ಬೆದರಿಸಿ, ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಈತನ ಕೃತ್ಯದಿಂದ ನೊಂದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

ಆರೋಪಿ ಇದೇ ರೀತಿ ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ದೃಶ್ಯ ಸೆರೆ ಹಿಡಿದಿದ್ದಾನೆ ಎನ್ನಲಾಗಿದ್ದು, ಆತನನ್ನು ಬಂಧಿಸಿ ಜೈಲಿಗೆ ಕಳಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...