alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ ಅವಹೇಳನ: ರೋಷನ್ ಬೇಗ್ ವಿರುದ್ಧ ಬಿ.ಜೆ.ಪಿ. ಆಕ್ರೋಶ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿ ಮಾತನಾಡುವ ಸಂದರ್ಭದಲ್ಲಿ ಸಚಿವ ರೋಷನ್ ಬೇಗ್ ಅವಾಚ್ಯ ಪದಗಳಿಂದ ನಿಂದಿಸಿದ್ದು, ಬಿ.ಜೆ.ಪಿ. ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ರೋಷನ್ ಬೇಗ್, ಮೋದಿ ಅವರನ್ನು ಟೀಕಿಸುವ ಭರಾಟೆಯಲ್ಲಿ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ.

ಇದಕ್ಕೆ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ರೋಷನ್ ಬೇಗ್ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ರೋಷನ್ ಬೇಗ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ, ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಬಿ.ಜೆ.ಪಿ. ಮುಖಂಡರು ಎಚ್ಚರಿಕೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...