alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನ ಎಂಬೆಸ್ಸಿ ಟೆಕ್ ವಿಲೇಜ್ ಗೆ ಬಾಂಬ್ ಬೆದರಿಕೆ

ಬೆಂಗಳೂರು ಹೊರವಲಯದ ಔಟರ್ ರಿಂಗ್ ರೋಡ್ ನಲ್ಲಿರುವ ಎಂಬೆಸ್ಸಿ ಟೆಕ್ ವಿಲೇಜ್ ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಕೂಡಲೇ ಉದ್ಯೋಗಿಗಳನ್ನು ಹೊರ ಕಳುಹಿಸಲಾಗಿದೆ.

ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಟೆಕ್ ಪಾರ್ಕ್ ಒಳಗಿರುವ ಸಿಸ್ಕೋ ಕಚೇರಿಗೆ ಬೆದರಿಕೆ ಕರೆ ಬಂದಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಅಲ್ಲದೇ ಎಂಬೆಸ್ಸಿ ಟೆಕ್ ವಿಲೇಜ್ ನಲ್ಲಿ ಕಾರ್ಯ ನಿರ್ವಹಿಸುವ ಏಳು ಸಾವಿರಕ್ಕೂ ಅಧಿಕ ಮಂದಿ ನೌಕರರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಯಿತು.

ಶ್ವಾನದಳದೊಂದಿಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಂಪೂರ್ಣ ತಪಾಸಣೆ ನಡೆಸಿದರೂ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಕಿಡಿಗೇಡಿಗಳು ಈ ಹುಸಿ ಕರೆ ಮಾಡಿರಬಹುದೆಂದು ಶಂಕಿಸಲಾಗಿದ್ದು, ಕರೆಯ ಮೂಲವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...