alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಕ್ರಾಂತಿ: ಪ್ರಯಾಣಿಕರಿಗೆ ಶುಭ ಸುದ್ದಿ….

ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೋಗಲು ಪ್ಲಾನ್ ಮಾಡಿಕೊಂಡವರಿಗೆ ಸಿಹಿ ಸುದ್ದಿ ಇಲ್ಲಿದೆ. ಇಂದಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) 300 ವಿಶೇಷ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಉತ್ತರ ಕರ್ನಾಟಕದ ಜಿಲ್ಲೆಗಳು, ಶಿವಮೊಗ್ಗ, ಹಾಸನ, ಮಂಗಳೂರು ಮೊದಲಾದ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಗೆ ವಿಶೇಷ ಬಸ್ ಗಳು ಹೊರಡಲಿವೆ. ಸ್ಯಾಟ್ ಲೈಟ್ ಬಸ್ ನಿಲ್ದಾಣದಿಂದ ತಮಿಳುನಾಡು, ಮಡಿಕೇರಿ, ಮೈಸೂರು ಮೊದಲಾದ ಕಡೆಗಳಿಗೆ ಬಸ್ ಹೊರಡಲಿವೆ.

ಶುಕ್ರವಾರ ಮತ್ತು ಶನಿವಾರ ವಿಶೇಷ ಬಸ್ ಗಳು ಹೊರಡಲಿದ್ದು, ಜನವರಿ 15, 16 ರಂದು ವಾಪಸ್ ಬರಲಿವೆ. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರುತ್ತದೆ. ಹಾಗಾಗಿ ಕೆ.ಎಸ್.ಆರ್.ಟಿ.ಸಿ. ವಿಶೇಷ ಬಸ್ ವ್ಯವಸ್ಥೆ ಮಾಡಿದೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...