alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ

driver

ಬೆಂಗಳೂರು: ಸಂಚಾರ ಪೊಲೀಸರ ಸಮಯಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದೆ.

ಕುಡಿದು ಶಾಲಾ ಬಸ್ ಚಾಲನೆ ಮಾಡುತ್ತಿದ್ದ ವ್ಯಕ್ತಿಯನ್ನು ಹೆಚ್.ಎ.ಎಲ್. ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ಬಸ್ ನಲ್ಲಿದ್ದ 20 ಮಕ್ಕಳು ಪಾರಾಗಿದ್ದಾರೆ.

ಖಾಸಗಿ ಶಾಲಾ ಬಸ್ ಚಾಲಕ ಮುಕುಂದ್ ಎಂಬಾತ ಮದ್ಯ ಸೇವಿಸಿದ್ದು, ಅಮಲಿನಲ್ಲೇ ಮಕ್ಕಳನ್ನು ಮನೆಗೆ ಬಿಡಲು ಹೊರಟಿದ್ದಾನೆ.

ಅಡ್ಡಾದಿಡ್ಡಿ ಬಸ್ ಚಾಲನೆ ಮಾಡಿದ್ದನ್ನು ಗಮನಿಸಿದ ಪೊಲೀಸರು, ಶಾಲಾ ಬಸ್ ನಿಲ್ಲಿಸಿ ಪರಿಶೀಲನೆ ನಡೆಸಿದಾಗ, ಮದ್ಯಪಾನ ಮಾಡಿರುವುದು ಗೊತ್ತಾಗಿದೆ.

ಮಕ್ಕಳನ್ನು ಮನೆಗೆ ಕಳುಹಿಸಲು ಬೇರೆ ವ್ಯವಸ್ಥೆ ಮಾಡಲಾಗಿದ್ದು, ಚಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...