alex Certify
ಕನ್ನಡ ದುನಿಯಾ       Mobile App
       

Kannada Duniya

ಅಧಿಕಾರಿ ಪತ್ನಿಯೊಂದಿಗೆ ಅಸಭ್ಯ ವರ್ತನೆ

adikari

ಬೆಂಗಳೂರು: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯಂದು ನಡೆದ, ಮತ್ತೊಂದು ಕಿಡಿಗೇಡಿ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.

ಕಬ್ಬನ್ ಪಾರ್ಕ್ ನಲ್ಲಿರುವ ಕರ್ನಾಟಕ ರಾಜ್ಯ ಟೆನಿಸ್ ಅಸೋಸಿಯೇಷನ್ ನಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ 15 ಮಂದಿ, ಮಹಿಳೆಯೊಂದಿಗೆ ಅನುಚಿತ ವರ್ತನೆ ತೋರಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಉಪ ಆಯುಕ್ತರಾಗಿರುವ ಅಧಿಕಾರಿಯ ಪತ್ನಿಯೊಂದಿಗೆ ಕಿಡಿಗೇಡಿಗಳು ಅನುಚಿತವಾಗಿ ವರ್ತಿಸಿದ್ದು, ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಟೆನಿಸ್ ಅಸೋಸಿಯೇಷನ್ ಆಯೋಜಿಸಿದ್ದ ನ್ಯೂ ಇಯರ್ ಪಾರ್ಟಿಯಲ್ಲಿ ಗಣ್ಯಾತಿಗಣ್ಯರು ಭಾಗವಹಿಸಿದ್ದು, ಅಧಿಕಾರಿ ತಮ್ಮ ಪತ್ನಿಯೊಂದಿಗೆ ಪಾಲ್ಗೊಂಡಿದ್ದಾರೆ.

ಅಧಿಕಾರಿ ಊಟ ತರಲು ಕೌಂಟರ್ ಬಳಿ ಹೋಗಿದ್ದ ಸಂದರ್ಭದಲ್ಲಿ, ಅವರ ಪತ್ನಿ ಒಬ್ಬರೇ ಇರುವುದನ್ನು ಗಮನಿಸಿದ ದುರುಳರು, ಸೆಲ್ಫಿ ತೆಗೆದುಕೊಳ್ಳಬೇಕೆಂದು ಅನುಚಿತವಾಗಿ ವರ್ತಿಸಿದ್ದಾರೆ.

ಅಧಿಕಾರಿ ಬಂದ ಕೂಡಲೇ ಪತ್ನಿ ಅವರಿಗೆ ವಿಷಯ ತಿಳಿಸಿದ್ದು, ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ.

ದೂರಿನ ಆಧಾರದ ಮೇಲೆ ಸಿ.ಸಿ. ಟಿ.ವಿ. ದೃಶ್ಯಗಳನ್ನು ಪರಿಶೀಲಿಸಿದ ಪೊಲೀಸರು, ಐ.ಪಿ.ಸಿ. ಸೆಕ್ಷನ್ 509, 510, 149 ರ ಅಡಿ ಪ್ರಕರಣ ದಾಖಲಿಸಿಕೊಂಡು, ಶಿವರಾಜ್ ಎಂಬುವವನನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ವಿಐಪಿ ಕಾರ್ ಮೇಲಿನ ಕೆಂಪು ದೀಪ ತೆರವುಗೊಳಿಸಿದರೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಸಿಗಲಿದೆಯೇ..?

    View Results

    Loading ... Loading ...