alex Certify
ಕನ್ನಡ ದುನಿಯಾ       Mobile App
       

Kannada Duniya

ಗೌರಿ ಲಂಕೇಶ್ ಹತ್ಯೆ ಪ್ರಕರಣ : ಮೂವರು ವಶಕ್ಕೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖಾ ತಂಡದ ಅಧಿಕಾರಿಗಳು ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಸೆಪ್ಟಂಬರ್ 5 ರಂದು ಗೌರಿ ಲಂಕೇಶ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದ್ದು, ಎಸ್.ಐ.ಟಿ. ಹಂತಕರ ಬೆನ್ನು ಬಿದ್ದಿದೆ. ವಿವಿಧ ಆಯಾಮಗಳಿಂದ ತನಿಖೆ ನಡೆಸಲಾಗಿದೆ.

ಅಲ್ಲದೇ, ಸಿ.ಸಿ. ಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮೂವರು ಶಂಕಿತರ ರೇಖಾ ಚಿತ್ರಗಳನ್ನು ಬಿಡುಗಡೆ ಮಾಡಿ ಸಾರ್ವಜನಿಕರಿಂದ ಮಾಹಿತಿ ಕೋರಲಾಗಿತ್ತು.

ಗದಗದಲ್ಲಿ ಮೂವರು ಶಂಕಿತರ ಕುರಿತಾಗಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಎಸ್.ಐ.ಟಿ. ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಅದರಂತೆ ಕಾರ್ಯಾಚರಣೆ ನಡೆಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿಗೆ ಮೂವರನ್ನು ಕರೆತಂದು ವಿಚಾರಣೆ ನಡೆಸಲಾಗಿದೆ. ಗೌರಿ ಲಂಕೇಶ್ ಹತ್ಯೆಯಲ್ಲಿ ಈ ಮೂವರು ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ನಡೆಸಲಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...