alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಲ್ಲಿ ಮತ್ತೆ ಕಿಡಿಗೇಡಿಗಳ ಅಟ್ಟಹಾಸ

ಬೆಂಗಳೂರು: ರಾಜಧಾನಿಯಲ್ಲಿ ಕಿಡಿಗೇಡಿಗಳು ಮತ್ತೆ ಅಟ್ಟಹಾಸ ಮೆರೆದಿದ್ದು, 10 ಕ್ಕೂ ಅಧಿಕ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಕುರುಬರಹಳ್ಳಿ ಜೆ.ಸಿ. ನಗರದ ವಿವಿಧ ಕಡೆಗಳಲ್ಲಿ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋ, ಕಾರ್ ಸೇರಿ ವಿವಿಧ ವಾಹನಗಳಿಗೆ ಹಾನಿ ಮಾಡಿದ್ದಾರೆ.

ಬೈಕ್ ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ಕಲ್ಲು ತೂರಿ ವಾಹನಗಳ ಗಾಜುಗಳಿಗೆ ಹಾನಿ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬಸವೇಶ್ವರ ನಗರ ಮತ್ತು ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎರಡೂ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...