alex Certify
ಕನ್ನಡ ದುನಿಯಾ       Mobile App
       

Kannada Duniya

ಗೆಳತಿಗೆ ಕರೆ ಮಾಡಿದ ವಿದ್ಯಾರ್ಥಿ ದುಡುಕಿದ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಕತ್ತು ಕೊಯ್ದುಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

28 ವರ್ಷದ ಶರವಣ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿಯಾಗಿದ್ದಾನೆ. ನಿನ್ನೆ ರಾತ್ರಿ ಕ್ಯಾಂಪಸ್ ನಲ್ಲಿ ವಿಷ ಸೇವಿಸಿ, ನಂತರ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಅಲ್ಲಿದ್ದ ವಿದ್ಯಾರ್ಥಿಗಳು ಜ್ಞಾನಭಾರತಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶರವಣ ಕುಮಾರನನ್ನು ಆಸ್ಪತ್ರೆಗೆ ಸೇರಿಸಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಶರವಣ ಕುಮಾರ್ ನ ಫೋನ್ ವಶಕ್ಕೆ ಪಡೆದು ತನಿಖೆ ನಡೆಸಿದ್ದು, ಆತ ಹುಡುಗಿಗೆ ಕರೆ ಮಾಡಿರುವುದು ಗೊತ್ತಾಗಿದೆ. ತನಿಖೆ ಮುಂದುವರೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...