alex Certify
ಕನ್ನಡ ದುನಿಯಾ       Mobile App
       

Kannada Duniya

ಸೊಸೆಯ ಡೆತ್ ನೋಟ್ ಹರಿದು ಹಾಕಿದ್ರಾ ಅತ್ತೆ, ಮಾವ?

ಬೆಂಗಳೂರು: ಒಂದೂವರೆ ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳೆ, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.

ಚಿತ್ರದುರ್ಗ ಮೂಲದ ನಿರ್ಮಲಾ(24) ಆತ್ಮಹತ್ಯೆ ಮಾಡಿಕೊಂಡವರು. ಬೆಂಗಳೂರಿನ ವಿಶ್ವನಾಥ್ ಅವರೊಂದಿಗೆ ನಿರ್ಮಲಾರ ಮದುವೆಯಾಗಿದ್ದು, ಪತಿ ಜಪಾನ್ ನಲ್ಲಿ ಉದ್ಯೋಗದಲ್ಲಿದ್ದು, ಆಗಾಗ ಬೆಂಗಳೂರಿಗೆ ಬಂದು ಹೋಗುತ್ತಿದ್ದರು.

2 ದಿನಗಳ ಹಿಂದಷ್ಟೇ ವಿಶ್ವನಾಥ್ ಬೆಂಗಳೂರಿಗೆ ಬಂದು ವಾಪಸ್ ಜಪಾನ್ ಗೆ ತೆರಳಿದ್ದಾರೆ. ನಿನ್ನೆ ನಿರ್ಮಲಾ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಅತ್ತೆ, ಮಾವನ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಪೊಲೀಸರು ಬರುವ ಮೊದಲೇ ಅತ್ತೆ, ಮಾವ ಡೆತ್ ನೋಟ್ ಹರಿದು ಹಾಕಿದ್ದು, ಪೊಲೀಸರು ಅದನ್ನು ವಶಕ್ಕೆ ಪಡೆದು ಜೋಡಿಸಿದ್ದಾರೆ. ಆರ್.ಆರ್. ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅತ್ತೆ, ಮಾವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...