alex Certify
ಕನ್ನಡ ದುನಿಯಾ       Mobile App
       

Kannada Duniya

2 ಪ್ರತ್ಯೇಕ ಘಟನೆಯಲ್ಲಿ ಒಂದೇ ಕುಟುಂಬದ ಮೂವರ ಸಾವು

ಬೆಂಗಳೂರು: ಬೆಂಗಳೂರು ಉತ್ತರ ತಾಲ್ಲೂಕಿನ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ 2 ಪ್ರತ್ಯೇಕ ಘಟನೆಯಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರಲ್ಲಿ ಮೂವರು ಮೃತಪಟ್ಟಿದ್ದಾರೆ.

ಬೆಟ್ಟಹಳ್ಳಿಯಲ್ಲಿ ವೆಂಕಟ ಅರಸಯ್ಯ(75) ತೇರಮ್ಮ(65) ಮೃತಪಟ್ಟಿದ್ದು, ತಾವರೆಕೆರೆ ವ್ಯಾಪ್ತಿಯಲ್ಲಿ ಮಗಳು ಹೊನ್ನಮ್ಮ(48) ಸಾವನ್ನಪ್ಪಿದ್ದಾರೆ.

ಮಗ ದೊಡ್ಡೇಗೌಡ(31) ಗಂಭೀರ ಸ್ಥಿತಿಯಲ್ಲಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...