alex Certify
ಕನ್ನಡ ದುನಿಯಾ       Mobile App
       

Kannada Duniya

ರಾಸಲೀಲೆ ಸ್ವಾಮಿಗೆ ಮಠದಿಂದ ಗೇಟ್ ಪಾಸ್

ಬೆಂಗಳೂರು: ಮಠದಲ್ಲಿಯೇ ರಾಸಲೀಲೆ ನಡೆಸಿದ ಬೆಂಗಳೂರು ಉತ್ತರ ತಾಲ್ಲೂಕಿನ ಹುಣಸಮಾರನಹಳ್ಳಿಯ ಮದ್ದೇವಣಾಪುರ ಮಠದ ದಯಾನಂದ ಸ್ವಾಮೀಜಿ ಅವರನ್ನು ಹೊರಹಾಕಲು ತೀರ್ಮಾನಿಸಲಾಗಿದೆ.

ಶ್ರೀಶೈಲ ಜಗದ್ಗುರುಗಳು ಮಠಕ್ಕೆ ಆಗಮಿಸಿ, ಭಕ್ತರು ಹಾಗೂ ಹಿರಿಯ ಶ್ರೀಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಸುದೀರ್ಘ ಸಮಾಲೋಚನೆ ಬಳಿಕ, ದಯಾನಂದನಿಗೆ ಗೇಟ್ ಪಾಸ್ ನೀಡಲು ನಿರ್ಧಸಲಾಗಿದೆ. 15 ದಿನಗಳ ಒಳಗೆ ಮುಂದಿನ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ತೀರ್ಮಾನಿಸಲಾಗಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ದಯಾನಂದ ಹಾಗೂ ಅವರ ಕುಟುಂಬದವರನ್ನು ಮಠದಿಂದ ಹೊರ ಹಾಕಬೇಕೆಂದು ಒತ್ತಾಯಿಸಿ ಭಕ್ತರು ಹೋರಾಟ ನಡೆಸಿದ್ದರು.

ಮತ್ತೊಂದು ಬಣ ಸ್ವಾಮೀಜಿ ಬೆಂಬಲಕ್ಕೆ ನಿಂತಿದ್ದು, ಮಠಕ್ಕೆ ಆಗಮಿಸಿದ ಶ್ರೀಶೈಲ ಜಗದ್ಗುರುಗಳು ಉಭಯ ಬಣದವರೊಂದಿಗೆ ಚರ್ಚೆ ನಡೆಸಿದ್ದಾರೆ. ಚರ್ಚೆಯ ಬಳಿಕ ಸಮಿತಿಯನ್ನು ರಚಿಸಿ ಮುಂದಿನ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಶ್ರೀಗಳು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಮಠದ ಪರಂಪರೆಗೆ ಧಕ್ಕೆ ತರಬಾರದು ಎಂದು ತಿಳಿಸಿದ್ದಾರೆ.

ಮುಂದಿನ 15 ದಿನದಲ್ಲಿ ಸಮಿತಿ ಮುಂದಿನ ಉತ್ತಾಧಿಕಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ. ಸಮಿತಿ ನೀಡಲಿರುವ ವರದಿಯನ್ನಾಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮಠದಲ್ಲಿ ದಯಾನಂದ ಪರ ಮತ್ತು ವಿರೋಧ ಬಣದವರ ನಡುವೆ ವಾಗ್ವಾದ ನಡೆದಿದ್ದು, ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ಎಲ್ಲರನ್ನೂ ಚದುರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...