alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರು ವಿ.ವಿ. ಸಿಂಡಿಕೇಟ್ ಸದಸ್ಯನ ವಿರುದ್ಧ ಕೇಸ್

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಮುಖ್ಯ ಇಂಜಿನಿಯರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ, ಸಿಂಡಿಕೇಟ್ ಸದಸ್ಯರೊಬ್ಬರ ವಿರುದ್ಧ ಜ್ಞಾನಭಾರತಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯ ಕಾಲೇಜ್ ಕಟ್ಟಡ ನಿರ್ಮಾಣ ಕಾಮಗಾರಿಯ ಬಿಲ್ ವಿಚಾರವಾಗಿ ಸಿಂಡಿಕೇಟ್ ಸದಸ್ಯ, ಇಂಜಿನಿಯರ್ ರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಕಾಲೇಜ್ ಕಟ್ಟಡದ ಕಾಮಗಾರಿ ಬಿಲ್ ಗೆ ಸಹಿ ಹಾಕಿ, ಶೇ. 10 ರಷ್ಟು ಕಮಿಷನ್ ಕೊಡುವಂತೆ ಸಿಂಡಿಕೇಟ್ ಸದಸ್ಯ ಇಂಜಿನಿಯರ್ ಗೆ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಒಪ್ಪದ ಕಾರಣ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮುಖ್ಯ ಇಂಜಿನಿಯರ್ ಜ್ಞಾನಭಾರತಿ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...