alex Certify
ಕನ್ನಡ ದುನಿಯಾ       Mobile App
       

Kannada Duniya

ಅವಾಂತರಕ್ಕೆ ಕಾರಣವಾಯ್ತು ಅನೈತಿಕ ಸಂಬಂಧ

ಬೆಂಗಳೂರು: ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ತಾಯಿ, ಪತ್ನಿಯ ಮೇಲೆ ವ್ಯಕ್ತಿಯೊಬ್ಬ ಹಲ್ಲೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಪುಲಿಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

6 ವರ್ಷಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಇತ್ತೀಚೆಗೆ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಬೆಳೆಸಿದ್ದಾನೆ. ಇದೇ ಕಾರಣಕ್ಕೆ ಪತ್ನಿ ಮತ್ತು ತಾಯಿಯೊಂದಿಗೆ ಜಗಳವಾಡಿದ್ದಾನೆ. ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಮದುವೆಯಾಗುವುದಾಗಿ ಹೇಳಿ, ಡೈವೋರ್ಸ್ ಕೊಡುವಂತೆ ಪತ್ನಿಗೆ ಕಿರುಕುಳ ನೀಡಿದ್ದಾನೆ.

ಹಲವು ಸಲ ಪತ್ನಿಯ ಮೇಲೆ ಹಲ್ಲೆ ಕೂಡ ಮಾಡಿದ್ದು, ಈತನ ವರ್ತನೆಯಿಂದ ರೋಸಿ ಹೋದ ತಾಯಿ ಹಾಗೂ ಪತ್ನಿ, ಪುಲಿಕೇಶಿ ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...