alex Certify
ಕನ್ನಡ ದುನಿಯಾ       Mobile App
       

Kannada Duniya

ಅಟ್ಟಾಡಿಸಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಜೂಜುಕೋರರು

ಬೆಂಗಳೂರು: ಬೆಂಗಳೂರಿನಲ್ಲಿ ಜೂಜುಕೋರರು ಅಟ್ಟಹಾಸ ಮೆರೆದಿದ್ದಾರೆ. ಜೂಜು ಅಡ್ಡೆಯ ಮೇಲೆ ದಾಳಿ ಮಾಡಿದ ಇಬ್ಬರು ಪೊಲೀಸರನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ.

ಬೆಂಗಳೂರು ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ಜೂಜಾಡುತ್ತಿದ್ದವರನ್ನು ಚದುರಿಸಲು ಪೊಲೀಸರಾದ ಶರಣಪ್ಪ ಮತ್ತು ಬಸಪ್ಪ ಮುಂದಾಗಿದ್ದು, ಪಾನಮತ್ತರಾಗಿದ್ದ ಜೂಜುಕೋರರ ಗುಂಪು ಪೊಲೀಸರನ್ನು ಥಳಿಸಿದೆ.

ಪೊಲೀಸರು ದೂರಕ್ಕೆ ಸರಿದರೂ ಅವರನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ಮಾಡಿದ್ದಾರೆ. ಘಟನೆಯ ಬಳಿಕ ಕ್ರಮ ಕೈಗೊಂಡ ಪೊಲೀಸರು, ಹಲ್ಲೆ ಮಾಡಿದ್ದ ಕುಮಾರ್, ಸಂದೀಪ್, ಮೂರ್ತಿ, ಮುರಳಿ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.

ಯುಗಾದಿ ಹಬ್ಬದ ದಿನ ಜೂಜಾಟ ನಡೆಯುತ್ತಿರುವ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಜೂಜಾಟ ನಿಲ್ಲಿಸಿ ಸ್ಥಳದಿಂದ ತೆರಳುವಂತೆ ಸ್ಥಳದಲ್ಲಿದ್ದವರಿಗೆ ಸೂಚಿಸಿದ್ದು, ಪೊಲೀಸರ ಮೇಲೆಯೇ ದುಷ್ಕರ್ಮಿಗಳು ಆಕ್ರಮಣ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...