alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ

lake

ಬೆಂಗಳೂರಿನ ಇಬ್ಬಲೂರು ಬಳಿ ಇರುವ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆ ಮತ್ತು ಬೆಂಕಿ ಆವರಿಸಿದ್ದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಎರಡು ವರ್ಷಗಳ ಹಿಂದೆ ಕೂಡ ಇದ್ದಕ್ಕಿದ್ದಂತೆ ಬೆಳ್ಳಂದೂರು ಕೆರೆಯಲ್ಲಿ ಭಾರೀ ನೊರೆ ಹಾಗೂ ಬೆಂಕಿ ಕಾಣಿಸಿಕೊಂಡಿತ್ತು.

ಸುಮಾರು 919 ಎಕರೆ ವಿಸ್ತಾರವಾದ ಈ ಕೆರೆಯಲ್ಲೀಗ ನೊರೆಯೇ ತುಂಬಿಕೊಂಡಿದೆ. ಅಪಾಯಕಾರಿ ರಾಸಾಯನಿಕಯುಕ್ತ ನೊರೆಗೆ ಬೆಂಕಿ ತಗುಲಿದ್ದು, ಸುತ್ತ ದಟ್ಟ ಹೊಗೆ ಆವರಿಸಿದೆ. ಕೆರೆಗೆ ಬೆಂಕಿ ಬಿದ್ದಿರುವ ಸುದ್ದಿ ಕೇಳಿ ಅದನ್ನು ವೀಕ್ಷಿಸಲು ಜನ ತಂಡೋಪತಂಡವಾಗಿ ಆಗಮಿಸಿದ್ರು.

ಕೆರೆಗೆ ರಾಸಾಯನಿಕಗಳು ಮತ್ತು ಒಳಚರಂಡಿ ನೀರು ಸೇರುತ್ತಿರುವುದರಿಂದ ನೊರೆ ಕಾಣಿಸಿಕೊಳ್ತಾ ಇದೆ, ಅದಕ್ಕೆ ಆಗಾಗ ಬೆಂಕಿ ಬೀಳುತ್ತಿದೆ. ಇದರಿಂದ ಸುತ್ತಲ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಆವರಿಸಿದೆ. ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಹಲವು ಬಾರಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆದ್ರೆ ಸಮಸ್ಯೆಗೆ ಶಾಶ್ವತ ಪರಿಹಾರ ಇದುವರೆಗೂ ಸಿಕ್ಕಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...