alex Certify
ಕನ್ನಡ ದುನಿಯಾ       Mobile App
       

Kannada Duniya

ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು

ಭದ್ರಾ ಜಲಾಶಯದಿಂದ ಎಡ ಹಾಗೂ ಬಲ ನಾಲೆಗಳಿಗೆ ಶುಕ್ರವಾರ ಮಧ್ಯರಾತ್ರಿಯಿಂದ ನೀರು ಹರಿಸಲಾಗುತ್ತಿದೆ. ಶಿವಮೊಗ್ಗದ ಮಲವಗೊಪ್ಪದಲ್ಲಿನ ಕಾಡಾ ಕಚೇರಿಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಾಲೆಗಳಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ.

ಬಯಲುಸೀಮೆ ತೋಟಗಾರಿಕೆ ಬೆಳೆಗಳಿಗೆ ಅನುಕೂಲವಾಗುವಂತೆ ನಾಲೆಗಳಿಗೆ ನೀರು ಹರಿಸಲಾಗಿದೆ. ಎಡ ನಾಲೆಯಲ್ಲಿ ಪ್ರತಿದಿನ 380 ಕ್ಯೂಸೆಕ್ ನಂತೆ 15 ದಿನಗಳ ಕಾಲ ನೀರು ಹರಿಸಲಾಗುವುದು. ಬಲ ನಾಲೆಯಲ್ಲಿ ಪ್ರತಿದಿನ 1500 ಕ್ಯೂಸೆಕ್ ನಂತೆ 10 ದಿನ ನೀರು ಹರಿಸಲಾಗುವುದು. ಜನವರಿಯಲ್ಲಿ ಮತ್ತೆ ಸಲಹಾ ಸಮಿತಿ ಸಭೆ ನಡೆಸಿ ನೀರು ಬಿಡಲು ತೀರ್ಮಾನಿಸಲಾಗಿದೆ.

ಶುಕ್ರವಾರ ರಾತ್ರಿಯಿಂದ ನಾಲೆಗಳಿಗೆ ನೀರು ಹರಿಸುವ ಪ್ರಸ್ತಾಪಕ್ಕೆ ಕೆಲವು ರೈತರು ವಿರೋಧ ವ್ಯಕ್ತಪಡಿಸಿದರು. ಭತ್ತದ ಬೆಳೆಗೆ ಅನುಕೂಲವಾಗುವಂತೆ ಜನವರಿಯಿಂದ ನೀರು ಹರಿಸುವಂತೆ ಒತ್ತಾಯಿಸಿದರು.

ಮುಂಗಾರು ಹಂಗಾಮಿಗೆ ನೀರು ಬಿಡದ ಕಾರಣ ಅಚ್ಚುಕಟ್ಟು ಪ್ರದೇಶದ ರೈತರು ನಷ್ಟಕ್ಕೆ ಒಳಗಾಗಿದ್ದಾರೆ. ನೀರಿಲ್ಲದೇ ಕಳೆದ ಎರಡು ಬೆಳೆಗಳಿಂದ ವಂಚಿತರಾಗಿದ್ದಾರೆ ಎಂದು ಚನ್ನಗಿರಿ ಮತ್ತು ಹೊನ್ನಾಳಿ ಭಾಗದ ರೈತರು ಹೇಳಿದರು.

ಕೊನೆಗೆ ಜನವರಿಯಲ್ಲಿ ಸಭೆ ನಡೆಸಿ ಭತ್ತದ ಬೆಳೆಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳುವ ಭರವಸೆ ನೀಡಲಾಯಿತು.

ಸಭೆಯಲ್ಲಿ ಕಾಡಾ ಅಧ್ಯಕ್ಷ ಸುಂದರೇಶ್, ಶಾಸಕರಾದ ಶಾಂತನಗೌಡ, ಶಾರದಾ ಪೂರ್ಯನಾಯ್ಕ, ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ರೈತ ಮುಖಂಡರಾದ ಕೆ.ಟಿ.ಗಂಗಾಧರ್,  ಹೆಚ್.ಆರ್.ಬಸವರಾಜಪ್ಪ ಮೊದಲಾದವರಿದ್ದರು.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...