alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಮಶಾನದಲ್ಲಿ ನವಜಾತ ಶಿಶುವಿಗೆ ಜೀವ

protest

ಭದ್ರಾವತಿ: ವೈದ್ಯರು ಮೃತಪಟ್ಟಿದೆ ಎಂದು ಘೋಷಿಸಿದ್ದ ಮಗುವಿಗೆ ಸ್ಮಶಾನದಲ್ಲಿ ಜೀವ ಬಂದ ಘಟನೆ ಭದ್ರಾವತಿಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಿ ಆಸ್ಪತ್ರೆ ಎದುರು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.

ಆಗ ತಾನೇ ಜನಿಸಿದ್ದ ನವಜಾತ ಶಿಶು ಮೃತಪಟ್ಟಿದೆ ಎಂದು ವೈದ್ಯರು ಹೇಳಿದ್ದರಿಂದ ಮನೆಯವರೆಲ್ಲಾ ದುಃಖದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದು. ಈ ಸಂದರ್ಭದಲ್ಲೇ ಶಿಶು ಉಸಿರಾಡುತ್ತಿರುವುದು ಗೊತ್ತಾಗಿದೆ. ತಕ್ಷಣವೇ ಅದನ್ನು ಖಾಸಗಿ ಆಸ್ಪತ್ರೆಗೆ ಕರೆತಂದು ವೈದ್ಯರಿಗೆ ತೋರಿಸಿದಾಗ, ಮಗು ಉಸಿರಾಡುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಭದ್ರಾವತಿ ತಾಲ್ಲೂಕಿನ ತಳ್ಳಿಕಟ್ಟೆ ಜಯನಗರದ ಮಹಿಳೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ವೈದ್ಯರು ಬೆಳವಣಿಗೆಯಿಲ್ಲದೇ, ಮಗು ಮೃತಪಟ್ಟಿದೆ ಎಂದು ಬಟ್ಟೆಯಲ್ಲಿ ಸುತ್ತಿ ಕೊಟ್ಟಿದ್ದಾರೆ. ಮನೆಯವರು ಅಂತ್ಯ ಸಂಸ್ಕಾರಕ್ಕೆ ಮುಂದಾಗಿದ್ದ ಸಂದರ್ಭದಲ್ಲಿ ಮಗು ಉಸಿರಾಡುತ್ತಿರುವುದು ಗೊತ್ತಾಗಿ, ಆಸ್ಪತ್ರೆಗೆ ಸೇರಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯ ವೈದ್ಯರು, ಪರೀಕ್ಷೆ ಮಾಡದೇ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು ಹೇಳಿದ್ದಾಗಿ ಪೋಷಕರು ಆರೋಪಿಸಿದ್ದಾರೆ.

ಈ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಸಾರ್ವಜನಿಕರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ, ಭದ್ರಾವತಿ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...