alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರತ್ ಬಂದ್: ಕೋಲಾರದಲ್ಲಿ ಕೈ ಕಾರ್ಯಕರ್ತರ ದೌರ್ಜನ್ಯ

ಕೋಲಾರ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ಹಿನ್ನಲೆಯಲ್ಲಿ ಕೋಲಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೋಟೆಲ್ ಒಂದರಲ್ಲಿ ದೌರ್ಜನ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬಂದ್ ಗೆ ಬೆಂಬಲ ವ್ಯಕ್ತಪಡಿಸುವಂತೆ ಸೂಚಿಸಿ ಕಾರ್ಯಕರ್ತರು ಬಲವಂತದಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದಾರೆ. ಮಾಲೂರಿನ ವಿನಾಯಕ ಹೋಟೆಲ್ ಗೆ ನುಗ್ಗಿದ ಕೈ ಕಾರ್ಯಕರ್ತರು, ಹೋಟೆಲ್ ಓಪನ್ ಆಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಹೋಟೇಲ್ ಮಾಲೀಕ ಮಧು ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ.

ಅಲ್ಲದೇ ತಯಾರಾಗಿರುವ ಆಹಾರ-ತಿಂಡಿಗಳನ್ನು ಎತ್ತಿಕೊಂಡು ಬಂದು ಹೊರಗೆ ಚೆಲ್ಲಿದ್ದಾರೆ. ಹೋಟೆಲ್, ಅಂಗಡಿಗಳನ್ನು ಸಂಪೂರ್ಣ ಬಂದ್ ಮಾಡುವಂತೆ ಆಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...