alex Certify
ಕನ್ನಡ ದುನಿಯಾ       Mobile App
       

Kannada Duniya

ಗಮನಿಸಿ: ನಾಳೆ ಬಸ್ ಗಳ ಓಡಾಟ ಬಹುತೇಕ ಸ್ಥಗಿತ ಸಾಧ್ಯತೆ

ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಸೆಪ್ಟೆಂಬರ್ 10 ರ ನಾಳೆ ‘ಭಾರತ್ ಬಂದ್’ ಗೆ ಕರೆ ನೀಡಿದ್ದು, ಇದಕ್ಕೆ ಬಹುತೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿರುವ ಕಾರಣ ಕೆ.ಎಸ್.ಆರ್.ಟಿ.ಸಿ., ಬಿಎಂಟಿಸಿ ಬಸ್ ಸೇರಿದಂತೆ ಖಾಸಗಿ ಬಸ್ ಗಳು ಸಹ ಸಂಚಾರ ಸ್ಥಗಿತಗೊಳಿಸುವ ಸಾಧ್ಯತೆ ಇದೆ.

ಆಟೋ ಚಾಲಕರು, ಓಲಾ, ಉಬರ್ ಕ್ಯಾಬ್ ಚಾಲಕರು ಮತ್ತು ಮಾಲೀಕರು ಸಹ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದು, ವಾಹನಗಳನ್ನು ರಸ್ತೆಗಿಳಿಸದಿರಲು ತೀರ್ಮಾನಿಸಿದ್ದಾರೆ. ಜೊತೆಗೆ ರಾಜ್ಯ ಸರ್ಕಾರವೂ ಸಹ ಬಂದ್ ಗೆ ಬೆಂಬಲ ವ್ಯಕ್ತಪಡಿಸಿರುವುದರಿಂದ ಸರ್ಕಾರಿ ಆಡಳಿತ ಯಂತ್ರ ಸ್ಥಗಿತಗೊಳ್ಳಲಿದೆ.

ಆದರೆ ಸರಕು ಸಾಗಣೆ ವಾಹನಗಳು ಎಂದಿನಂತೆ ಸಂಚರಿಸಲಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಲಾರಿ ಮಾಲೀಕರ ಮತ್ತು ಏಜೆಂಟರ ಒಕ್ಕೂಟದ ಅಧ್ಯಕ್ಷ ಷಣ್ಮುಗಪ್ಪ, ತಮ್ಮದು ರಾಜಕೀಯೇತರ ಸಂಘಟನೆಯಾಗಿರುವುದರಿಂದ ರಾಜಕೀಯ ಪಕ್ಷ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇದರಿಂದ ದೂರವಿರಲು ತೀರ್ಮಾನಿಸಿದ್ದೇವೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...