alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಿಗಲಿದೆಯಾ ಸಿಹಿ ಸುದ್ದಿ…?

ತೈಲ ಬೆಲೆ ಏರಿಕೆಯನ್ನು ವಿರೋಧಿಸಿ ಸೋಮವಾರದಂದು ಕಾಂಗ್ರೆಸ್ ಸೇರಿದಂತೆ ಕೆಲ ಪಕ್ಷಗಳು ಕರೆ ನೀಡಿದ್ದ ‘ಭಾರತ್ ಬಂದ್’ ಗೆ ರಾಜ್ಯದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಆಡಳಿತಾರೂಢ ಸಮ್ಮಿಶ್ರ ಸರ್ಕಾರವೇ ಬಂದ್ ಕರೆಯನ್ನು ಬೆಂಬಲಿಸಿದ್ದರಿಂದ ಸಹಜವಾಗಿಯೇ ಇದು ಯಶಸ್ವಿಯಾಗಿದೆ.

ಈ ಮಧ್ಯೆ ಬಂದ್ ಆರಂಭಕ್ಕೂ ಮುನ್ನ ರಾಜಸ್ಥಾನ ಸರ್ಕಾರ, ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದ್ದು, ಆಂಧ್ರ ಪ್ರದೇಶ ಸರ್ಕಾರವೂ ಈ ಕ್ರಮವನ್ನು ಅನುಸರಿಸಿದೆ. ಇದರಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಈ ರಾಜ್ಯಗಳಲ್ಲಿ ಕೊಂಚ ಮಟ್ಟಿಗೆ ಇಳಿಕೆಯಾಗಿದೆ.

ಇದೇ ರೀತಿ ಕರ್ನಾಟಕದಲ್ಲೂ ತೆರಿಗೆ ಇಳಿಕೆ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಆರಂಭವಾಗಿದ್ದು, ಇದಕ್ಕೆ ಪೂರಕವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಆರ್ಥಿಕ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಬಜೆಟ್ ಸಂದರ್ಭದಲ್ಲಿ ರೈತರ ಸಾಲ ಮನ್ನಾ ಮಾಡುವ ಸಲುವಾಗಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಶೇಕಡ ಎರಡರಷ್ಟು ಏರಿಕೆ ಮಾಡಲಾಗಿದ್ದು, ಇದರಿಂದಾಗಿ ಪೆಟ್ರೋಲ್-ಡೀಸೆಲ್ ಬೆಲೆ ಮತ್ತಷ್ಟು ಜಾಸ್ತಿಯಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...