alex Certify
ಕನ್ನಡ ದುನಿಯಾ       Mobile App
       

Kannada Duniya

‘ಭಾರತ್ ಬಂದ್’ ಹಿನ್ನಲೆ: ಆಟೋ ಚಾಲಕರಿಂದ ಸಾರ್ವಜನಿಕರ ಜೇಬಿಗೆ ಕತ್ತರಿ

ದಿನದಿಂದ ದಿನಕ್ಕೆ ಏರುತ್ತಿರುವ ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಧಾರವಾಡ, ಸೇರಿದಂತೆ ರಾಜ್ಯದ ಹಲವೆಡೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿವೆ.

ಭಾರತ್​ ಬಂದ್​ ಅನ್ನು ಬಂಡವಾಳ ಮಾಡಿಕೊಂಡಿರುವ ಕೆಲ ಆಟೋ ಚಾಲಕರು, ಸಾರ್ವನಿಕರಿಂದ ಮನಬಂದಂತೆ ಹಣ ಸುಲಿಗೆ ಮಾಡುತ್ತಿದ್ದಾರೆ. ಬಂದ್​ ಹೆಸರಲ್ಲಿ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಹಾಗೂ ಹುಬ್ಬಳ್ಳಿಯ ಬಸ್ ನಿಲ್ದಾಣಗಳಲ್ಲಿ ಆಟೋ ಚಾಲಕರು ತಮ್ಮ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ.

ಹುಬ್ಬಳ್ಳಿಯಿಂದ ಧಾರವಾಡಕ್ಕೆ ಡ್ರಾಪ್​ ಮಾಡಲ 500-600 ರೂ.ವರೆಗೂ ಬೇಡಿಕೆ ಇಟ್ಟಿದ್ದಾರೆ. ಉಳಿದ ದಿನಗಳಲ್ಲಿ ಕೇವಲ 150 ರೂ. ಪಡೆಯುತ್ತಿದ್ದ ಆಟೋ ಚಾಲಕರು, ಬಂದ್​ ಹಿನ್ನೆಲೆಯಲ್ಲಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಕೂಡ ಆಟೋ ಚಾಲಕರು ಒಬ್ಬ ಪ್ರಯಾಣಿಕನಿಗೆ 600 ರೂ. ನೀಡುವಂತೆ ಇಬ್ಬರು ಪ್ರಯಾಣಿಕರಿಗೆ 1200 ರೂ. ನೀಡುವಂತೆ ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...