alex Certify
ಕನ್ನಡ ದುನಿಯಾ       Mobile App
       

Kannada Duniya

‘ಭಾರತ್ ಬಂದ್’ ಗೆ ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ

ಶಿವಮೊಗ್ಗ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ಗೆ ಶಿವಮೊಗ್ಗದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಕೆ.ಎಸ್.ಆರ್.ಟಿ.ಸಿ., ಖಾಸಗಿ ಬಸ್ ಸಂಪೂರ್ಣ ಬಂದ್ ಆಗಿದ್ದವು. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಹೋಟೆಲ್, ಚಿತ್ರಮಂದಿರ ಸೇರಿದಂತೆ ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿತ್ತು.

ಹೊರ ಊರುಗಳಿಂದ ಆಗಮಿಸಿದ್ದ ಪ್ರಯಾಣಿಕರು ಬಸ್ ಗಳಿಲ್ಲದೇ ತೊಂದರೆ ಅನುಭವಿಸಬೇಕಾಯಿತು. ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿತ್ತು. ಪ್ರಮುಖ ವಾಣಿಜ್ಯ ಸ್ಥಳಗಳಾದ ಗಾಂಧಿ ಬಜಾರ್, ನೆಹರೂ ರಸ್ತೆ, ಬಿ.ಹೆಚ್. ರಸ್ತೆ, ದುರ್ಗಿಗುಡಿ, ಸವಳಂಗ ರಸ್ತೆ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು.

ಕಾಂಗ್ರೆಸ್ ಕರೆ ನೀಡಿದ್ದ ಬಂದ್ ಗೆ ಜೆಡಿಎಸ್ ಜಿಲ್ಲಾ ಘಟಕ, ಕೆಲವು ಕನ್ನಡಪರ ಸಂಘಟನೆಗಳು, ಆಟೋ ಮಾಲೀಕರು ಹಾಗೂ ಚಾಲಕರ ಸಂಘ, ಖಾಸಗಿ ಬಸ್ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದವು. ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್ ಶಾಪ್, ಪೆಟ್ರೋಲ್ ಬಂಕ್, ನಂದಿನಿ ಹಾಲಿನ ಕೇಂದ್ರಗಳು ಎಂದಿನಂತೆ ತೆರೆದಿದ್ದವು.

ಬ್ಯಾಂಕ್, ಅಂಚೆ ಕಚೇರಿ, ಬಿಎಸ್ಎನ್ಎಲ್ ಕಚೇರಿ, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವಾದರೂ ಸಾರ್ವಜನಿಕರ ಸಂಖ್ಯೆ ಕಡಿಮೆ ಇತ್ತು. ಬಂದ್ ಬಗ್ಗೆ ಮೊದಲೇ ಸೂಚನೆ ನೀಡಿದ್ದ ಕಾರಣ ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ಜನಸಂಚಾರ ವಿರಳವಾಗಿತ್ತು. ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಎತ್ತಿನ ಗಾಡಿಗಳೊಂದಿಗೆ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...