alex Certify
ಕನ್ನಡ ದುನಿಯಾ       Mobile App
       

Kannada Duniya

ಉಡುಪಿಯಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ

ಉಡುಪಿ: ಭಾರತ್ ಬಂದ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಆರಂಭವಾಗಿ ಜಟಾಪಟಿಗೆ ಕಾರಣವಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆ ನಿಡಿರುವ ಭಾರತ್ ಬಂದ್ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಉಡುಪಿ ಜಿಲ್ಲೆಯ ಹಲವೆಡೆಗಳಲ್ಲಿ ಬಲವಂತವಾಗಿ ಅಂಗಡಿ-ಮುಂಗಟ್ಟುಗಳನ್ನು, ಹೋಟೆಲ್ ಗಳನ್ನು ಮುಚ್ಚಿಸುತ್ತಿದ್ದರು.

ಪ್ರಧಾನಿ ಮೋದಿ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ಮಧ್ಯೆ ಪ್ರವೇಶಿಸಿಸಿದ ಬಿಜೆಪಿ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಬಲವಂತದಿಂದ ಅಂಗಡಿ ಮುಚ್ಚಿಸುವುದಕ್ಕೆ ತಡೆಯೊಡ್ಡಿದ್ದಾರೆ. ಅಲ್ಲದೇ ಪ್ರಧಾನಿ ಮೋದಿಗೆ ಜೈಕಾರ ಹಾಕಿದ್ದಾರೆ. ಈ ವೇಳೆ ಉಭಯ ಕಾರ್ಯಕರ್ತರ ನಡುವೆ ವಾಗ್ವಾದ ಆರಂಭವಾಗಿ ಪರಸ್ಪರ ನೂಕಾಟ-ತಳ್ಳಾಟಗಳು ಆರಂಭವಾಗಿವೆ.

ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಎರಡೂ ಪಕ್ಷಗಳ ಕಾರ್ಯಕರ್ತರನ್ನು ಸಮಾಧಾನಪಡಿಸಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ. ಇನ್ನು ಅಂಕೋಲಾದಲ್ಲಿಯೂ ಕಾಂಗ್ರೆಸ್ ಕಾರ್ಯಕರ್ತರು ಅಂಗಡಿಗಳನ್ನು ಬಲವಂತದಿಂದ ಮುಚ್ಚಿಸಲು ಮುಂದಾಗಿದ್ದು, ಇದಕ್ಕೆ ನಿರಾಕರಿಸಿದ ವೇಳೆ ಸ್ವೀಟ್, ತರಕಾರಿಗಳನ್ನು ಅಂಗಡಿಯಿಂದ ಹೊರಗೆ ಚೆಲ್ಲಿ ದಾಂಧಲೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...