alex Certify
ಕನ್ನಡ ದುನಿಯಾ       Mobile App
       

Kannada Duniya

ಗೆಲುವಿನ ನಗೆ ಬೀರಿದ ದೇವೇಗೌಡರ ಸೊಸೆ

12733436_1034313383294165_2238328328552929609_n

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಹೊಳೆನರಸೀಪುರ ತಾಲೂಕಿನ ಹಳೇಕೋಟೆ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಸೊಸೆ ಭವಾನಿ ರೇವಣ್ಣ ಜಯಭೇರಿ ಬಾರಿಸುವ ಮೂಲಕ ಗೌಡರ ಕುಟುಂಬದ ಮತ್ತೊಬ್ಬ ಸದಸ್ಯರು ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶಿಸಿದಂತಾಗಿದೆ.

ರಾಜಕೀಯದ ಕನಸು ಹೊತ್ತು ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದ ಭವಾನಿ ರೇವಣ್ಣ ಅವರನ್ನು ಮತದಾರರು ಕೈ ಹಿಡಿದಿದ್ದು 4 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಭವಾನಿ ರೇವಣ್ಣ ತಮ್ಮ ರಾಜಕೀಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ವಿಶೇಷವೆಂದರೆ ದೇವೇಗೌಡರ ಪ್ರಾಬಲ್ಯ ಹೊಂದಿರುವ ಈ ಪ್ರದೇಶದಲ್ಲಿ ಗೌಡರ ಸೊಸೆಯನ್ನು ಸೋಲಿಸುವ ಮೂಲಕ ಜೆಡಿಎಸ್ ಗೆ ಬಲವಾದ ಪೆಟ್ಟು ನೀಡಲು ಕಾಂಗ್ರೆಸ್ ಹರಸಾಹಸ ಪಟ್ಟಿತ್ತು. ಆದರೆ ಅಲ್ಲಿನ ಮತದಾರರು ಗೌಡರ ಸೊಸೆಯನ್ನು ಆಯ್ಕೆ ಮಾಡುವ ಮೂಲಕ ಕಾಂಗ್ರೆಸ್ ನ ಕನಸನ್ನು ನುಚ್ಚುನೂರು ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...