alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಐಡಿ ಪೊಲೀಸರಿಂದ ಮಹಾದೇವ ಸಾಹುಕಾರ ಅರೆಸ್ಟ್

ಭೀಮಾತೀರದ ಹಂತಕ ಗಂಗಾಧರ ಚಡಚಣನ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಹದೇವ ಸಾಹುಕಾರ ಭೈರಗೊಂಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೆರೂರಿನಲ್ಲಿರುವ ತನ್ನ ಮನೆಗೆ ಮಹಾದೇವ ಸಾಹುಕಾರ ಬುಧವಾರ ರಾತ್ರಿ ಬಂದಿದ್ದ ಮಾಹಿತಿ ಪಡೆದಿದ್ದ ಪೊಲೀಸರು, ಇಂದು ಬೆಳಗ್ಗೆ ದಾಳಿ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಗಂಗಾಧರ ಚಡಚಣನ ಹತ್ಯೆ ಪ್ರಕರಣದಲ್ಲಿ ಕೆಲ ಪೊಲೀಸ್ ಅಧಿಕಾರಿಗಳೂ ಶಾಮೀಲಾಗಿದ್ದು, ಈ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದರು. ಇದೀಗ ಪ್ರಮುಖ ಆರೋಪಿ ಮಹಾದೇವ ಸಾಹುಕಾರ ಅರೆಸ್ಟ್ ಆಗಿದ್ದು, ಚಡಚಣ ಠಾಣೆಗೆ ಆರೋಪಿಯನ್ನು ಕರೆದೊಯ್ದಿರುವ ಪೊಲೀಸರು ವಿಚಾರಣೆಗೆ ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...