alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಮಾನವೀಯತೆ ಮರೆತಿದ್ದಾರೆ ಜನ

ಬೀದರ್: ಅಪಘಾತದ ಸಂದರ್ಭದಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುವವರನ್ನು ಆಸ್ಪತ್ರೆಗೆ ಸೇರಿಸದೇ, ಫೋಟೋ ತೆಗೆಯುವುದರಲ್ಲಿ ನಿರತರಾಗುವ ಕೆಲವರು ಮಾನವೀಯತೆಯನ್ನೇ ಮರೆಯುತ್ತಾರೆ.

ಇಂತಹ ಅನೇಕ ಘಟನೆಗಳು ನಡೆದಿದ್ದು, ಅಪಘಾತವಾದಾಗ ಮಾನವೀಯತೆ ಮರೆಯದೇ, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವಂತೆ ಜಾಗೃತಿ ಮೂಡಿಸಲಾಗ್ತಿದೆ.

ಆದರೂ, ಬೀದರ್ ನಲ್ಲಿ ಇಂತಹುದೇ ಘಟನೆ ಮರುಕಳಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಬದಲಿಗೆ ಅಲ್ಲಿದ್ದವರು ಫೋಟೋ ತೆಗೆದುಕೊಳ್ಳುವುದರಲ್ಲಿ ನಿರತರಾಗಿದ್ದಾರೆ.

ಬೀದರ್ ಕೆ.ಇ.ಬಿ. ರಸ್ತೆಯಲ್ಲಿ ಸರ್ಕಾರಿ ಸಾರಿಗೆ ಬಸ್ ಡಿಕ್ಕಿಯಾಗಿ ನರಸಪ್ಪ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದು, ಒದ್ದಾಡಿದರೂ ಸಹಾಯಕ್ಕೆ ಬಾರದ ಜನ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಳ್ಳುವುದರಲ್ಲಿ ನಿರತರಾಗಿದ್ದಾರೆ. ಕೆಲವರು 20 ನಿಮಿಷಗಳ ಬಳಿಕ ಆಂಬುಲೆನ್ಸ್ ಗೆ ಕರೆ ಮಾಡಿದ್ದು, ನಂತರದಲ್ಲಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...