alex Certify
ಕನ್ನಡ ದುನಿಯಾ       Mobile App
       

Kannada Duniya

ಅಶೋಕ್ ಖೇಣಿ ಮನೆಗೆ ಬೆಂಕಿ

keni-fire

ಬೀದರ್: ಬೀದರ್ ದಕ್ಷಿಣ ವಿಧಾನಸಭೆ ಕ್ಷೇತ್ರದ ಶಾಸಕ ಅಶೋಕ್ ಖೇಣಿ ಅವರ ಮನೆಗೆ ಬೆಂಕಿ ತಗುಲಿ ವಸ್ತುಗಳು ಸುಟ್ಟು ಹೋಗಿವೆ.

ಬೀದರ್ ನಗರದ ರಾಂಪುರೆ ಕಾಲೋನಿಯಲ್ಲಿರುವ ಖೇಣಿ ಅವರ ನಿವಾಸದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ್ದು, ಪೀಠೋಪಕರಣ, ಕಂಪ್ಯೂಟರ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಮಗ್ರಿಗಳು ಸುಟ್ಟು ಹೋಗಿವೆ. ಈ ಸಂದರ್ಭದಲ್ಲಿ ಖೇಣಿಯವರು ಮನೆಯಲ್ಲಿದ್ದರು ಎನ್ನಲಾಗಿದೆ.

ಬೆಂಕಿ ತಗುಲಿದ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...