alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಿಯತಮೆಯ ತಂದೆ ಬೈದಿದ್ದಕ್ಕೆ ದುಡುಕಿದ ವಿದ್ಯಾರ್ಥಿ

bidar-stude

ಬೀದರ್: ಪ್ರೀತಿಸಿದ್ದ ಯುವತಿಯ ಪೋಷಕರು ಮನೆಗೆ ಬಂದು ಗಲಾಟೆ ಮಾಡಿದ್ದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ರೈಲ್ವೇ ಗೇಟ್ ಸಮೀಪ ನಡೆದಿದೆ.

18 ವರ್ಷದ ವಿದ್ಯಾರ್ಥಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಐ.ಟಿ.ಐ. ಓದುತ್ತಿದ್ದ ವಿದ್ಯಾರ್ಥಿ ತನ್ನ ಸಹಪಾಠಿಯನ್ನು ಪ್ರೀತಿಸಿದ್ದು, ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಬುದ್ಧಿವಾದ ಹೇಳಿದ್ದಾರೆ.

ಅಲ್ಲದೇ, ಯುವಕನ ಮನೆಗೆ ಬಂದು ಮಗಳ ವಿಚಾರಕ್ಕಾಗಿ ಗಲಾಟೆ ಮಾಡಿದ್ದಾರೆ. ಇದರಿಂದ ಮನನೊಂದ ಯುವಕ ರೈಲಿಗೆ ತಲೆ ಕೊಟ್ಟಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...