alex Certify
ಕನ್ನಡ ದುನಿಯಾ       Mobile App
       

Kannada Duniya

ಆತ್ಮಹತ್ಯೆಗೆ ಯತ್ನಿಸಿದ್ರಾ ‘ಬಿಗ್ ಬಾಸ್’ ಪ್ರಥಮ್..?

prat-bigg

ಬೆಂಗಳೂರು: ‘ಬಿಗ್ ಬಾಸ್’ ವಿನ್ನರ್ ಪ್ರಥಮ್, ತನ್ನ ಸ್ನೇಹಿತನೊಂದಿಗೆ ಜಗಳವಾಡಿ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಪ್ರಥಮ್ ‘ಬಿಗ್ ಬಾಸ್’ ಮನೆಯಲ್ಲಿದ್ದಾಗ, ಅವರ ಪರವಾಗಿ ಸ್ನೇಹಿತ ಲೋಕೇಶ್ ಫೇಸ್ ಬುಕ್ ನಲ್ಲಿ ಪ್ರಚಾರ ನಡೆಸಿದ್ದಾರೆ.

ಹೊರಬಂದ ನಂತರ ಇಬ್ಬರೂ ಅನ್ಯೋನ್ಯವಾಗಿಯೇ ಇದ್ದು, ನಂತರದಲ್ಲಿ ಜಗಳವಾಡಿಕೊಂಡಿದ್ದಾರೆ. ಪ್ರಥಮ್ ತನಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ಆಡಿಯೋವನ್ನು ಲೋಕೇಶ್ ಇತ್ತೀಚೆಗೆ ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ.

ರಾತ್ರಿ ಲೋಕೇಶ್ ರನ್ನು ತಾನಿದ್ದ ಸ್ಥಳಕ್ಕೆ ಕರೆಸಿಕೊಂಡ ಪ್ರಥಮ್ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಲೋಕೇಶ್ ಬಸವೇಶ್ವರ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆಯ ಬಳಿಕ ಪ್ರಥಮ್ ಸೆಲ್ಫಿ ವಿಡಿಯೋ ಮಾಡಿದ್ದು, ನಾನು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...