alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ

ಶಿವಮೊಗ್ಗ : ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕಾಚಿನಕಟ್ಟೆ ಸಮೀಪ ನಡೆದಿದೆ.
ಸಹದೇವಕುಮಾರ್ ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ.

ಕಾಚಿನಕಟ್ಟೆ ಬಳಿ ಹಂಪ್ಸ್ ಗಮನಿಸದೇ ಅವರು ಬ್ರೇಕ್ ಹಾಕಿದ್ದು, ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾರೆ. ತಲೆ ಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರು ಬಿದ್ದ ಕೂಡಲೇ ಸ್ಥಳೀಯರು ಆರೈಕೆ ಮಾಡಿ ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆದರೆ ಅಂಬುಲೆನ್ಸ್ ಬರುವಷ್ಟರಲ್ಲೇ ಸಹದೇವ ಕುಮಾರ್ ಮೃತಪಟ್ಟಿದ್ದಾರೆ.

ವಿನೋಬನಗರ ಖಾಸಗಿ ಶಾಲೆಯೊಂದರಲ್ಲಿ ವ್ಯವಸ್ಥಾಪಕರಾಗಿರುವ ಸಹದೇವ ಕುಮಾರ್, ಬಿ ಆರ್ ಪಿ ಯಲ್ಲಿ ಸ್ನೇಹಿತನನ್ನು ಭೇಟಿಯಾಗಿ ವಾಪಾಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...