alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರಿಗೆ ಬೈಕ್ ಡಿಕ್ಕಿ: ಸವಾರ ಸಾವು

ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಬರುತ್ತಿದ್ದವರು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಸವಾರ ಸಾವನ್ನಪ್ಪಿ, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತ್ರಿಬಲ್ ರೈಡ್ ನಲ್ಲಿ ವೇಗವಾಗಿ ಬಂದ ಬೈಕ್ ಸವಾರರು ಮೊದಲು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ಎದುರುಗಡೆಯಿಂದ ಬಂದ ಮತ್ತೊಂದು ಕಾರಿಗೂ ಡಿಕ್ಕಿ ಹೊಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಮುಂದಾಗಲಾಯಿತಾದರೂ ಮಾರ್ಗಮಧ್ಯದಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಗಾಯಗೊಂಡಿರುವ ಮತ್ತಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ಸಂಚಾರಿ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...