alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು

acc-nmklಸ್ನೇಹಿತರೊಬ್ಬರ ಪಾರ್ಟಿಗೆ ತೆರಳಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಾರ್ಟಿ ಮುಗಿಸಿಕೊಂಡು ಬೈಕ್ ನಲ್ಲಿ ವಾಪಾಸ್ಸಾಗುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಎಂ.ಎಸ್. ರಾಮಯ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿಷ್ಣು ನಾಯ್ಡು (19) ಹಾಗೂ ಗುಣವಂತ ಸಾಯಿ (19) ಮೃತಪಟ್ಟವರಾಗಿದ್ದು, ಎಂ.ಎಸ್. ರಾಮಯ್ಯ ಕಾಲೇಜು ಮುಖ್ಯ ರಸ್ತೆಯಲ್ಲಿ ತಡ ರಾತ್ರಿ 12-45 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ವೇಗವಾಗಿ ಬರುತ್ತಿದ್ದ ಇವರುಗಳ ಬೈಕ್, ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಳಿಕ ಮರವೊಂದಕ್ಕೆ ಗುದ್ದಿದೆ. ಹೆಲ್ಮೆಟ್ ಧರಿಸಿರದ ಕಾರಣ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಸದಾಶಿವನಗರ ಸಂಚಾರಿ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...