alex Certify
ಕನ್ನಡ ದುನಿಯಾ       Mobile App
       

Kannada Duniya

ಬೈಕ್ ಗಳ ನಡುವೆ ಭೀಕರ ಅಪಘಾತ: ಉಪನ್ಯಾಸಕ ಸೇರಿ ಮೂವರ ಸಾವು

ತುಮಕೂರು; ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಲೇಜು ಉಪನ್ಯಾಸಕ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ತುಮಕೂರು ಹೊರವಲಯದ ಬೈಪಾಸ್ ಬಳಿ ವೇಗವಾಗಿ ಬರುತ್ತಿದ್ದ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನೋರ್ವ ಆಸ್ಪತ್ರೆಗೆ ಸೇರಿಸಲೆಂದು ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಮೃತರನ್ನು ಕೊರಟಗೆರೆ ತಾಲೂಕಿನ ಆಶಿತ್(21), ನವೀನ್ ಕುಮಾರ್(24) ಹಾಗೂ ಕೋಲಾರ ಚಿಂತಾಮಣಿ ಮೂಲದ ಬೆಂಗಳೂರಿನ ವಿದ್ಯಾವರ್ಧಕ ಕಾಲೇಜಿನ ಉಪನ್ಯಾಸಕ ಸೋಮನಾಥ್(28) ಎಂದು ಗುರುತಿಸಲಾಗಿದೆ. ಕೊರಟಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...